ಪುತ್ತೂರು: ಕರುಳು ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ, ಕಬಕ ಗ್ರಾ.ಪಂ ಸದಸ್ಯ, ಕಬಕ ವಿದ್ಯಾಪುರ ನಿವಾಸಿ ಉಮ್ಮರ್ ಫಾರೂಕ್‌ರವರ ಪುತ್ರ ಮಹಮ್ಮದ್ ಫಝಲ್(4ವ.) ಜು.8ರಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೆಲ ದಿನಗಳ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ವೈದ್ಯರೋರ್ವರಲ್ಲಿ ಪರೀಕ್ಷಿಸಿದಾಗ ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸುವಂತೆ ಸಲಹೆ ನೀಡಿದ್ದರು. ಅದರಂತೆ ಪೋಷಕರು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಕರುಳಿಗೆ ಸಂಬಂಧಿಸಿದ ಖಾಯಿಲೆಯಿದ್ದು ಶಸ್ತ್ರ ಚಿಕಿತ್ಸೆ ನಡೆಸುವಂತೆ ತಿಳಿಸಿದ್ದರು.
ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ನಡೆಸಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರ ಚಿಕಿತ್ಸೆ ನಡೆದು ಎರಡು ದಿನ ದಿನಗಳಾದರೂ ಹೊಟ್ಟೆ ನೋವು ಇನ್ನಷ್ಟು ಉಲ್ಬಣಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.