ಚೆನ್ನೈ: ಕೆಲವು ತಿಂಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಯವರನ್ನ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ರಾಜ್ಯಾಧ್ಯಕ್ಷರಾಗಿದ್ದ ಡಾ. ಎಲ್. ಮುರುಗನ್ ಅವರನ್ನ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಂಡ ಹಿನ್ನೆಲೆ ರಾಜ್ಯಾಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆ ಅಣ್ಣಾಮಲೈ ಅವರನ್ನ ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಸೂಚಿಸಿದ್ದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.