ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮಮಂದಿರಕ್ಕೆ ಎಲ್ಲಾ ಹಿಂದುಗಳ ಸಹಬಾಗಿತ್ವ ಇರಬೇಕೆನ್ನುವ ನಿಟ್ಟಿನಲ್ಲಿ ನಿಧಿ ಸಂಗ್ರಹಕ್ಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಮುಂದಿನ ಜನವರಿ 15 ರಿಂದ ಫೆಬ್ರವರಿ 27 ರವರೆಗೆ 45 ದಿನಗಳ ಕಾಲ ಈ ವಿಶೇಷ ಅಭಿಯಾನ ಇಡೀ ದೇಶಾದ್ಯಂತ ನಡೆಯಲಿದ್ದು.ಈ ಅಭಿಯಾನದ ಪುತ್ತೂರು ಜಿಲ್ಲಾ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ಡಿಸೆಂಬರ್ 7 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆ ಬಳಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಓಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ ಕ್ಷೇತ್ರದ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು,ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ಪರಿವಾರ ಸಂಘಟನೆಯ ಪ್ರಮುಖರು.ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.