ಬೆಂಗಳೂರು : ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ನೀಡುತ್ತಿರುವ ಕರ್ತವ್ಯ ಭತ್ಯೆ ಹೆಚ್ಚಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ರವರಿಗೆ ಮನವಿ ಸಲ್ಲಿಸಿದರು.
ಗೃಹ ರಕ್ಷಕ ದಳದ ಸಿಬ್ಬಂದಿಗಳು ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿದ್ದು, ಗೃಹ ರಕ್ಷಕ ದಳದ ಸಿಬ್ಬಂದಿಗಳ ಕರ್ತವ್ಯ ಭತ್ಯೆಯಾಗಿ ಕೇವಲ ರೂ.380 ಪಡೆಯುತ್ತಿದ್ದು ಲಾಕ್ಡೌನ್ ಕಾರಣದಿಂದಾಗಿ ಕರ್ತವ್ಯ ನಿರತ ಸಿಬ್ಬಂದಿಗಳು ಸಂಕಷ್ಟದಲ್ಲಿದ್ದು, ಆದ್ದರಿಂದ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ನೀಡುತ್ತಿರುವ ಕರ್ತವ್ಯ ಭತ್ಯೆ ರೂ.380 ರಿಂದ 750ಕ್ಕೆ ಹೆಚ್ಚಿಸಿ ವಿಶೇಷ ಪ್ಯಾಕೇಜ್ ಘೋಷಿಸಬೇಕಾಗಿ ಶಾಸಕರು ಮನವಿ ಮಾಡಿದರು.