ಉಪ್ಪಿನಂಗಡಿ : ಪೆಟ್ರೋಲ್, ಡೀಸೆಲ್ ಹಾಗೂ ದಿನ ಬಳಕೆಯ ವಸ್ತುಗಳ ಮೇಲಿನ ಬೆಲೆ ಏರಿಕೆಯ ವಿರುದ್ಧವಾಗಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಮತ್ತು ಪಾದಯಾತ್ರೆಯು ಗಾಂಧಿ ಪಾರ್ಕ್ ಜಂಕ್ಷನ್ ನಿಂದ ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದವರೆಗೆ ಜು.10 ರಂದು ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ,ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಲುಕ್ಮಾನ್ ರವರು ಭಾಗವಹಿಸಲಿದ್ದಾರೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.