ಕಡಬ: ಆತೂರು ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಮಾಡಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಜುಲೈ 9 ರಂದು ಇಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಹಿರೇಬಂಡಾಡಿ ಗ್ರಾಮದ ಕೆಮ್ಮಾರ ಶೌಕತ್ ಅಲಿ ಮತ್ತು ಕೊಯಿಲ ಗ್ರಾಮದ ಆತೂರು ಬೈಲು ಅಬ್ದುಲ್ ಖಾದರ್ ಬಂಧಿತ ಆರೋಪಿಗಳು. ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಶೆಡ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ.