ಕಲ್ಲಡ್ಕ ಜು 10 ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಕರೆಯ ಮೇರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶೀಘ್ರ ಶಾಲೆ ಆರಂಭಿಸುವಂತೆ ಆಗ್ರಹಿಸಿ ಕಾರ್ಡ್ಅಭಿಯಾನಕ್ಕೆ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪ್ರಥಮ ಪತ್ರ ಬರೆಯುವ ಮೂಲಕ ಚಾಲನೆ ನೀಡಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪೋಷಕರು ಸ್ವಯಂ ಪ್ರೇರಿತರಾಗಿ ಅಂಚೆ ಕಾರ್ಡ್ ಬರೆದು ರವಾನಿಸುವ ಮಾಡುವ ಮೂಲಕ ಅಭಿಯಾನದಲ್ಲಿ ಕೈ ಜೋಡಿಸಿದರು.
ಸರಕಾರ ಆನ್‌ಲೈನ್ ಹಾಗೂ ಟಿವಿ ಮಾಧ್ಯಮದ ಮೂಲಕ ನೀಡುವ ಶಿಕ್ಷಣವು ಹಳ್ಳಿ ಪ್ರದೇಶದಲ್ಲಿ ವಿದ್ಯುತ್ ಹಾಗೂ ನೆಟ್ವರ್ಕ್ ಸಮಸ್ಯೆಯಿಂದಾಗಿ ಮಕ್ಕಳಿಗೆ ಸರಿಯಾಗಿ ಶಿಕ್ಷಣವು ತಲುಪುತ್ತಿಲ್ಲ ಆದುದರಿಂದ ವಿದ್ಯಾಗಮ ಶಿಕ್ಷಣ ವ್ಯವಸ್ಥೆಯನ್ನು ಅವಲಂಭಿಸುವ ಬದಲು ಮುಖಾಮುಖಿ ಆರಂಭಿಸುವಂತೆ ಪೋಷಕರ ಒತ್ತಾಯಗಳು ಕೇಳಿ ಬಂದ ಹಿನ್ನಲೆಯಲ್ಲಿ ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮಕ್ಕಳ ಸುರಕ್ಷತೆ ಹಾಗೂ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆ ಆರಂಭಿಸುವಂತೆ ಆಗ್ರಹಿಸುವ ಪೋಷಕರು ಕಾರ್ಡ್ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ತಮ್ಮ ತಮ್ಮ ಮನೆಯಿಂದಲೇ ಶಿಕ್ಷಣ ಸಚಿವರಿಗೆ ಕಾರ್ಡ್ ಬರೆಯುವಂತೆ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯು ಕಾರ್ಡ್ ಅಭಿಯಾನಕ್ಕೆ ಕರೆ ನೀಡಿತ್ತು ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸಂಜೀವ ಮೂಲ್ಯ ,ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಕಂಭ ಒಕ್ಕೂಟದ ಅಧ್ಯಕ್ಷ ಕೊರಗಪ್ಪ ನಾಯ್ಕ, ಮಜಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಮೈರ ,ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು