ಪುತ್ತೂರು : ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ್ ರೈ ಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ ಕೆ ಶಾಹುಲ್ ಹಮೀದ್ ರವರು ಅಬ್ದುಲ್ ಖಾದರ್ ಮೇರ್ಲ ರವನ್ನು ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಆದೇಸಿದ್ದಾರೆ.
ಅಬ್ದುಲ್ ಖಾದರ್ ಮೇರ್ಲ ರವರು ಈ ಹಿಂದೆ ಪುತ್ತೂರು ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಧರ್ಮಸ್ಥಳ ಯೋಜನೆಯ ಜನಜಾಗೃತಿ ಸಮಿತಿಯ ಕೆಯ್ಯೂರು ವಲಯ ಅಧ್ಯಕ್ಷರಾಗಿರುವ ಮೇರ್ಲರವರು , ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾ ಸಮಿತಿ ಸದಸ್ಯರಾಗಿರುತ್ತಾರೆ, ಹಾಗೂ ಕೆಯ್ಯೂರು ಗ್ರಾಮ ಪಂಚಾಯತ್ ಗೆ ಸತತವಾಗಿ ನಾಲ್ಕು ಬಾರಿ ಚುನಾಯಿತರಾಗಿರುತ್ತಾರೆ.