ಕಡಬ:ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಭಾನುವಾರದಂದು ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ.
ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.