ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ದ್ವೀತಿಯ ಪಿಯು ಪರೀಕ್ಷೆ ರದ್ದುಪಡಿಸಿರುವಂತೆ ಹತ್ತನೇ ತರಗತಿ ಪರೀಕ್ಷೆಗಳನ್ನೂ ಸಹ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೋವಿಡ್ ಸುರಕ್ಷಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.