ಪುತ್ತೂರು: ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಸೂಚನೆ ಮೇರೆಗೆ ದ ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ರವರ ಸೂಚನೆಯಂತೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪುತ್ತೂರು ಬ್ಲಾಕ್ ಸಮಿತಿಯ ಅಧ್ಯಕ್ಷರನ್ನಾಗಿ ಮೆಲ್ವಿನ್ ಮೊಂತೆರೋ ರವರನ್ನು ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಅಬ್ಬಾಸ್ ಅಲಿ ಯವರು ನೇಮಕ ಗೊಳಿಸಿ ಆದೇಶ ಮಾಡಿರುತ್ತಾರೆ.
ಕೆದಂಬಾಡಿ ಗ್ರಾಮದ ನಿವಾಸಿಯಾದ ಮೆಲ್ವಿನ್ ಮೊಂತೆರೋ ರವರು ಸಣ್ಣ ಉದ್ಯಮ ನಡೆಸುತ್ತಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿರುತ್ತಾರೆ, ಕುಂಬ್ರ ವರ್ತಕ ಸಂಘದ ಅಧ್ಯಕ್ಷರಾಗಿ, ಸ್ಥಳೀಯ ಯುವಕ ಮಂಡಲ ಸದಸ್ಯರಾಗಿ ಸೇವೆ ಸಲ್ಲಿಸಿದವರಾಗಿರುತ್ತಾರೆ.