ಬೆಂಗಳೂರು: ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜು.12ರಂದು ರಕ್ಷಾ ರಾಮಯ್ಯ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಯುವ ಕಾಂಗ್ರೆಸ್ ಘಟಕ ಪ್ರತಿಭಟನೆ ಯಾವುದೇ ಅನುಮತಿ ಪಡೆಯದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಲಾಗಿತ್ತು ನಡೆಸಿತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188, ಎನ್’ಡಿಎಂಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.