ಜಪಾನಿನಲ್ಲಿ ನಡೆಯುವ ಟೋಕಿಯೊ ಒಲಿಂಪಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ, ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮಿ ಶೇಖರ್ ಹಾಗೂ ಶುಭಾ ವೆಂಕಟೇಶನ್ ಅವರು 4×400 ಮಿಕ್ಸಡ್ ರಿಲೆಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ ಎಂದರು.
2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಖಿಲಭಾರತ ಅಂತರ ವಿಶ್ವವಿದ್ಯಾಲಯ ಕೂಟಗಳಲ್ಲಿ ಪ್ರತಿನಿಧಿಸಿದ್ದರು ಎಂದು ತಿಳಿಸಿದರು.
ಆಳ್ವಾಸ್ ವಿದ್ಯಾಸಂಸ್ಥೆಯ ಹಲವಾರು ಕ್ರೀಡಾ ವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್‌ನಲ್ಲಿ ಭಾಗವಹಿಸುವ ಸಾಧನೆ ಮಾಡಿದ್ದು, ಈ ಬಾರಿಯ ಒಲಿಂಪಿಕ್‌ಗೆ ಆಯ್ಕೆಯಾದ ಇಬ್ಬರು ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿಗೆ ಡಾ.ಎಂ.ಮೋಹನ ಆಳ್ವರು ತಲಾ 1 ಲಕ್ಷ ಪ್ರೋತ್ಸಾಹಧನ ನೀಡಿದ್ದಾರೆ.