ಮಂಗಳೂರು: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಜುಲೈ 14ರ ಬುಧವಾರ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪೊಲೀಸ್ ಠಾಣೆಯಲ್ಲಿ ಕರ್ತವ್ಯ ದಲ್ಲಿದ್ದ ಪೊಲೀಸ್ ಸಿಬ್ಬಂದಿಗಳಿಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಯುವತಿ ಸೇರಿದಂತೆ ಮೂವರಿಂದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದೆ. ನೋವೆಲ್ ಸಿಕ್ವೇರಾ, ಜಾನ್ ಸಿಕ್ವೇರಾ ಹಾಗು ಮತ್ತೊಬ್ಬ ಯುವತಿ ಹಲ್ಲೆ ನಡೆಸಿದ ಆರೋಪಿಗಳಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಹಲ್ಲೆಗೊಳಗಾದ ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೂಜಾ ಹಿರೇಮಠ ಮತ್ತು ನಾರಾಯಣ್ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ನೋವೆಲ್ ಸಿಕ್ವೇರಾ, ಜಾನ್ ಸಿಕ್ವೇರಾ ಹಾಗು ಮತ್ತೊಬ್ಬ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.