ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ಸಮಯಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್.ಐ ಜಂಬೂರಾಜ್ ಮಹಾಜನ್ ರವರಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಸ್‌ಐ ಎನ್.ಕೆ ಓಮನ ರವರನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ.
2020 ರ ಫೆಬ್ರವರಿ ತಿಂಗಳಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ತನ್ನ ಪ್ರಥಮ ನೇಮಕಾತಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಎಸ್.ಐ ಜಂಬೂರಾಜ್ ಮಹಾಜನ್ ರವರು ಒಂದೂವರೆ ವರ್ಷದ ಕರ್ತವ್ಯದ ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಳ್ಳುತ್ತಿದ್ದಾರೆ.
ಸುಬ್ರಹ್ಮಣ್ಯದಲ್ಲಿ ಎಸ್.ಐ.ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿ ಮೂಲದವರಾಗಿರುವ ಎನ್.ಕೆ.ಓಮನ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಓಮನ ರವರು ಸುಬ್ರಹ್ಮಣ್ಯಕ್ಕೆ ಹೋಗುವ ಮೊದಲು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.