ವಿದ್ಯಾಮಾತ ಅಕಾಡೆಮಿ,ಕ್ರೀಡಾಭಾರತಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ವತಿಯಿಂದ ‘ಕರ್ನಾಟಕ ಪೊಲೀಸ್ ನೇಮಕಾತಿ – 2021 ಪರೀಕ್ಷೆಯ ಪೂರ್ವ ತಯಾರಿ ಬಗ್ಗೆ ಉಚಿತ ಮಾಹಿತಿ ಕಾರ್ಯಾಗಾರವು’ 18 ಜುಲೈ 2021 ಭಾನುವಾರದಂದು ಪುತ್ತೂರಿನ ಬಂಟರ ಭವನದಲ್ಲಿ ಬೆ.9.30 ರಿಂದ ಸಾ.4 ರ ವರೆಗೆ ನಡೆಯಲಿದೆ.
ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು / ಸದ್ಯ ಓದುತ್ತಿದ್ದು ಅರ್ಜಿ ಸಲ್ಲಿಸಲು ಯೋಜನೆ ಹಾಕಿಕೊಂಡಿರುವ ವಿದ್ಯಾರ್ಥಿಗಳು ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಆಸಕ್ತರು ದಿ.17 ಜುಲೈ 2021 ಶನಿವಾರದ ಒಳಗಾಗಿ ನೇರವಾಗಿ ಹಾಜರಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಮೊದಲು ನೋಂದಣಿ ಮಾಡುವ 50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ.
ನೋಂದಣಿಗಾಗಿ:
ವಿದ್ಯಾಮಾತ ಅಕಾಡೆಮಿ
ಸ್ಪರ್ಧಾತ್ಮಕ ಪರೀಕ್ಷೆಗಳ ಅರ್ಜಿ ಸಲ್ಲಿಕೆ / ತರಬೇತಿ ಕೇಂದ್ರ,
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎಪಿಯಂಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ ಪುತ್ತೂರು ದ.ಕ -574201
ಫೋನ್ ನಂ.8590773486 / 9148935808