ಬೆಂಗಳೂರು: ಕೊರೊನಾ ಮೂರನೇ ಅಲೆ ಹಿನ್ನೆಲೆ ಡಿಸೆಂಬರ್ ವರೆಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ. ಇಲ್ಲಿ ಕಡಿಮೆ ಸಂಖ್ಯೆ ಜನ ಸೇರುವ ಕಾರಣ ಚುನಾವಣೆಗೆ ಅವಕಾಶ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಆದರೆ, ಜಿ.ಪಂ ಹಾಗೂ ತಾ.ಪಂಚಾಯತ್‌ಗಳಿಗೆ ಈ ವರ್ಷಾಂತ್ಯದವರೆಗೆ ಚುನಾವಣೆ ನಡೆಸದೇ ಇರಲು ನಿರ್ಧರಿಸಲಾಗಿದೆ.
ಇನ್ನು ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ಬಗ್ಗೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. 15 ಕೋಟಿ ರೂ. ಅನುದಾನವನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಅಗತ್ಯ ಬಿದ್ದಲ್ಲಿ ಹೆಚ್ಚಿನ ಅನುದಾನ ನೀಡುವುದಕ್ಕೂ ಸಹಮತ ವ್ಯಕ್ತಪಡಿಸಿದೆ.