ಮಂಗಳೂರು: ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಜು.16 ಶುಕ್ರವಾರ ಭಾರೀ ಭೂ ಕುಸಿತವಾಗಿದ್ದು ಹಳಿಗಳ ಮೇಲೆ ಮಣ್ಣು ಬಿದ್ದಿದೆ.
ರೈಲ್ವೆ ಇಲಾಖೆ ತಡೆಗೋಡೆ ನಿರ್ಮಿಸಿದ್ದರೂ ಭಾರೀ ಪ್ರಮಾಣದ ಗುಡ್ಡ ಕುಸಿದಿರುವುದರಿಂದ ತಡೆಗೋಡೆ ಜಾರಿ ಮಣ್ಣು ರೈಲು ಹಳಿಗಳ ಮೇಲೆ ಬಿದ್ದಿದೆ. ಭೂ ಕುಸಿತವಾಗಿರುವ ಹಿನ್ನಲೆಯಲ್ಲಿ ಈ ಹಳಿಯ ಮೂಲಕ ಚಲಿಸುವ ಎಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ರೈಲ್ವೇ ಇಲಾಖೆ ಹೇಳಿದೆ. ಇನ್ನು ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ರೈಲ್ವೆ ಇಲಾಖೆ ಮುಂದಾಗಿದೆ.