ಪುತ್ತೂರು: ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿದ್ದೂ ಅಲ್ಲಲ್ಲಿ ಅನಾಹುತ ಅಪಾರ ನಷ್ಟ ಉಂಟಾಗುತ್ತಿದೆ. ಜು.16ರಂದು ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ಉಪ್ಪಳಿಗೆ ಎಂಬಲ್ಲಿ ವ್ಯಕ್ತಿಯೊಬ್ಬರ ಮನೆಯ ತಡೆಗೋಡೆ ಕುಸಿದು ಬಿದ್ದಿದೆ.
ಉಪ್ಪಳಿಗೆ ನಿವಾಸಿ ಧನಂಜಯ ಎಂಬವರ ಮನೆಯ ಅಂಗಳದಲ್ಲಿ ನಿರ್ಮಿಸಿರುವ ತಡೆಗೋಡೆ ಕುಸಿದು ಬಿದ್ದಿರುವುದು.ಇಂದು ಮುಂಜಾನೆ ಹೂವಿನ ಗಾರ್ಡನ್ ಸಹಿತ ಜರಿದು ಬಿದ್ದಿದೆ ಎಂದು ತಿಳಿದು ಬಂದಿದೆ. ಅಲ್ಲದೇ ಇದರಿಂದ ಅಂಗಲದಲ್ಲಿ ಬಿರುಕು ಬಿಟ್ಟಿದ್ದು ಮತ್ತಷ್ಟು ಕುಸಿಯುವ ಅಪಾಯದಲ್ಲಿದೆ. ಘಟನೆಯಿಂದಾಗಿ ಲಕ್ಷಾಂತರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.