ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ಆಡಳಿತ ಅವಧಿ ಮುಗಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಆಡಳಿತಾಧಿಕಾರಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರು ಅಧಿಕಾರ ಸ್ವೀಕರಿಸಿದರು.
ವಿಟ್ಲ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೇರಿತ್ತು. ವಿಟ್ಲ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದು ಬಿಜೆಪಿ ಪಕ್ಷದ ಆಡಳಿತ ಅಧಿಕಾರಕ್ಕೆ ಬಂದಿತ್ತು. ಜುಲೈ 15ಕ್ಕೆ ಆಡಳಿತ ಕೊನೆಗೊಂಡಿತ್ತು.
ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಬಂಟ್ವಾಳ ತಹಶೀಲ್ದಾರ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿದ್ದರು. ಅದರಂತೆ ಅವರು ಅಧಿಕಾರ ಸ್ವೀಕರಿಸಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ಅವರು ಸ್ವಾಗತಿಸಿದರು. ಈ ಸಂದರ್ಭ ವಿಟ್ಲ ಕಂದಾಯ ನಿರೀಕ್ಷಕ ದಿವಾಕರ, ಗ್ರಾಮ ಕರಣಿಕ ಪ್ರಕಾಶ್ ಉಪಸ್ಥಿತರಿದ್ದರು.