ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಕೊರೊನಾ ಸಂಕಷ್ಟದ ಸಮಯದಲ್ಲಿ ಲಾಭಾಂಶ ವಿತರಣೆ ಮಾಡಿದ್ದು ತುಂಬಾ ಕೃತಜ್ಞತಾ ಪೂರ್ವಕವಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಒಕ್ಕೂಟ ಅಧ್ಯಕ್ಷರಾದ ಈಶ್ವರ ನಾಯ್ಕ್ ರವರು ಕಲ್ಲಡ್ಕದ ಪೂರ್ಲಿಪ್ಪಾಡಿ ಮರಾಠಿ ಸಮಾಜ ಸೇವಾ ಭವನದಲ್ಲಿ ನಡೆದ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟಗಳ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ ಸಂಘದ ಸುರಕ್ಷಾ ವಿಮಾ ಮೊತ್ತ ಹಾಗೂ ಪ್ರಕೃತಿ ವಿಕೋಪ ಒಳಗಾದ ಕುಟುಂಬಕ್ಕೆ ಪರಿಹಾರ ನಿಧಿ ವಿತರಣಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) ವಿಟ್ಲ ಇದರ ಯೋಜನಾಧಿಕಾರಿ ಚೆನ್ನಪ್ಪ ಗೌಡ ರವರು ಕಾವಂದರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸದಸ್ಯರಿಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಅಂದು ನೆಟ್ಟ ಗಿಡ ಇಂದು ಫಲ ಕೊಡುವಂತೆ ಬೆಳೆದಿದೆ. ಇವತ್ತಿನ ಕಷ್ಟದ ಪರಿಸ್ಥಿತಿಗೆ ಸಹಕಾರ ನೀಡುವಂತೆ ಪ್ರಸಾದ ರೂಪದಲ್ಲಿ ಸದಸ್ಯರಿಗೆ ಲಾಭಾಂಶವನ್ನು ವಿತರಣೆ ಮಾಡಲಾಗುತ್ತಿದೆ. ನಮ್ಮ ಕಲ್ಲಡ್ಕ ವಲಯದ 27 ಸಂಘಗಳ ಗುಣಮಟ್ಟದ ವ್ಯವಹಾರಕ್ಕೆ 5 ಲಕ್ಷದ 50 ಸಾವಿರ ಲಾಭಾಂಶ ಬಂದಿರುತ್ತದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಳ್ತಮಜಲು ಗ್ರಾಮ ಪಂಚಾಯತಿನ ಅಧ್ಯಕ್ಷ ಅಭಿಷೇಕ್ ಶೆಟ್ಟಿ ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಯೋಜನೆ ಮಾಡುವ ಎಲ್ಲಾ ಕಾರ್ಯಕ್ರಮಗಳಿಗೂ ಪಂಚಾಯತಿಯಿಂದ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಲ್ಲಡ್ಕ ಹಾಲು ಉತ್ಪಾದಕರ ಸಂಘದ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಕೊಟ್ಟಾರಿ, ಕಲ್ಲಡ್ಕ ಮರಾಠಿ ಸಮಾಜಸೇವಾ ಸಂಘದ ಕಾರ್ಯದರ್ಶಿ ನಾರಾಯಣ ನಾಯ್ಕ, ಗೋಳ್ತಮಜಲು ಬಿ ಒಕ್ಕೂಟದ ಅಧ್ಯಕ್ಷೆ ಶಿವಪ್ಪಗೌಡ, ಕಲ್ಲಡ್ಕ ಒಕ್ಕೂಟ ಅಧ್ಯಕ್ಷ ಶ್ರೀಮತಿ ತುಳಸಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ, ವಲಯ ಸೇವಾ ಪ್ರತಿನಿಧಿಗಳಾದ ವಿದ್ಯಾ, ಗಿರಿಜಾ, ಕೌಶಿತ, ಉಷಾ ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ಶ್ರೀಮತಿ ಸವಿತಾ ನಾರಾಯಣ ಸ್ವಾಗತಿಸಿ ,ಸೇವಾ ಪ್ರತಿನಿಧಿ ಶ್ರೀಮತಿ ಮಾಲತಿ ವಂದಿಸಿದರು. ಲೆಕ್ಕ ಪರಿಶೋಧಕ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.