ನಳಿನ್ ಕುಮಾರ್ ಕಟೀಲ್ ಮಾತನಾಡಿರುವ ಆಡಿಯೋ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಆಡಿಯೋ ವಿಚಾರಕ್ಕೆ ಸಂಭಂದಿಸಿ ಕುದ್ದು ನಳೀನ್ ಕುಮಾರ್ ಕಟೀಲ್ ಅವರೇ ಸ್ಪಷ್ಟನೆ ನೀಡಿದ್ದಾರೆ.
ನನ್ನ ಧ್ವನಿಯನ್ನೇ ಅನುಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟು ಪಕ್ಷಕ್ಕೆ ಧಕ್ಕೆ ತರುವ ಕೆಲಸ ಕಿಡಿಗೇಡಿಗಳಿಂದ ನಡೆದಿದೆ
.ಪಕ್ಷಕ್ಕೆ ಹಾಗೂ ಸರಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯ ಮಂತ್ರಿಗಳಾದ ಬಿ. ಎಸ್ ಯೆಡಿಯೂರಪ್ಪ ಅವರಿಗೆ ಮನವಿಯನ್ನು ಸಲ್ಲಿಸುತ್ತೇನೆ. ಇದರ ಹಿಂದಿರುವ ಕೈಗಳು ಯಾರೆಂಬ ಕುರಿತು ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.