ಪುತ್ತೂರು: ನಿಡ್ಪಳ್ಳಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಸಭೆಯು ಜು.18 ರಂದು ನಡೆಯಿತು. ಸಭೆಯ ಬಳಿಕ ಎಲ್ಲಾ ಘಟಕಗಳ ನೂತನ ಸಮಿತಿಯನ್ನು ರಚಿಸಲಾಯಿತು.
ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ್ ರೈ,ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್, ಬ್ಲಾಕ್ ಪ್ರದಾನ ಕಾರ್ಯದರ್ಶಿಗಳಾದ ಅಮಲ ರಾಮಚಂದ್ರ, ಪೂರ್ಣೇಶ್ ಭಂಡಾರಿ, ಕಾರ್ಯದರ್ಶಿ ಮನಮೋಹನ ರೈ,ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್ ಹಾಜಿ, ಕಾರ್ಮಿಕ ಘಟಕದ ಅಧ್ಯಕ್ಷ ಶರೋನ್ ಸಿಕ್ವೆರಾ, ಎಸ್ ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್,ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಕೆಮ್ಮಾರ, ಹಿಂದುಳಿದ ವರ್ಗ ಘಟಕದ ನಿಯೋಜಿತ ಅಧ್ಯಕ್ಷ ಹರೀಶ್ ನಿಡ್ಪಳ್ಳಿ,ಪಂಚಾಯತ್ ಮಾಜಿ ಉಪಾಧ್ಯಕ್ಷ ಅವಿನಾಶ್ ಕುಡಚಿಲ, ವಲಯ ಕಾಂಗ್ರೆಸ್ ಅಧ್ಯಕ್ಷ ನೆಲ್ಲಿಕಟ್ಟೆ ಸತೀಶ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಲಕ್ಷ್ಮಣ ನಾಯ್ಕ್, ನಿಡ್ಪಳ್ಳಿ ವಲಯ ಕಾಂಗ್ರೆಸ್ ನ ಸಮಿತಿ ಹಾಗೂ ವಿವಿಧ ಘಟಕಗಳ ವಲಯ ಸಮಿತಿ ಪಧಾಧಿಕಾರಿಗಳು ಉಪಸ್ಥಿತರಿದ್ದರು. ಬ್ಲಾಕ್ ಕಾರ್ಯಕಾರಿ ಸದಸ್ಯ ಭಾಸ್ಕರ್ ಕರ್ಕೇರ ಸ್ವಾಗತಿಸಿದರು, ಆಶಿಫ್ ತಂಬುತಡ್ಕ ಕಾರ್ಯಕ್ರಮ ನಿರ್ವಹಿಸಿದರು.