ಪುತ್ತೂರು : ಸೇವಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಮಂಗಳೂರು, ಪ್ರಣವ ಚಾರಿಟೇಬಲ್ ಟ್ರಸ್ಟ್ (ರಿ.), ಯೆಯ್ಯಾಡಿ, ಮಂಗಳೂರು ಹಾಗೂ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ ಜು.29 ರಂದು ನಡೆಯಲಿದೆ.
ಪುತ್ತೂರಿನ ದರ್ಬೆ ಫಿಲೋಮಿನ ಕಾಲೇಜ್ ಎದುರಿನ , ಸಚ್ಚಿದಾನಂದ ಸದನದಲ್ಲಿ ಈ ಶಿಬಿರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉದ್ಯಮಶೀಲನ ಗುಣ ಲಕ್ಷಣಗಳು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ಮಾಹಿತಿಗಳನ್ನು ನೀಡಲಾಗುವುದು.
ಅಭ್ಯರ್ಥಿಗಳು 18 ವರ್ಷ ದಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ.
ಪಾಸಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್ ಹಾಗೂ ಅಗತ್ಯ ದಾಖಲೆಗಳೊಂದಿಗೆ ಈ ಮೇಲಿನ ದಿನಾಂಕದಂದು ಸ್ಥಳಕ್ಕೆ ಹಾಜರಿರಬೇಕು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 9845752649, 9483688835 ಸಂಪರ್ಕಿಸಬಹುದಾಗಿದೆ.