ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರ ಹೆಸರಿನಲ್ಲಿ ಸೃಷ್ಟಿಯಾದ ನಕಲಿ ಆಡಿಯೋ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಪೋಲೀಸ್ ಕಮಿಷನರ್ ಶಶಿಕುಮಾರ್ ರವರಿಗೆ ಜಿಲ್ಲೆಯ ಶಾಸಕರುಗಳು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕರುಗಳಾದ ಸಂಜೀವ ಮಠಂದೂರು, ಹರೀಶ್ ಪೂಂಜಾ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಉಪಸ್ಥಿತರಿದ್ದರು.