ವಿಟ್ಲ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ಮಹಿಳೆಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ಗಾಯಾಳು ಮಹಿಳೆಯನ್ನು ಮಾರ್ನೆಮಿ ಗುಡ್ಡೆಯ ಚಂದ್ರಾವತಿ ಪಡಿಯಾರು ಎಂದು ಗುರುತಿಸಲಾಗಿದೆ.
ಹಳೆ ಬಸ್ ನಿಲ್ದಾಣದ ಕಾಮಧೇನು ಸ್ಟೋರ್ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಮಹಿಳೆ ನೆಲಕ್ಕೆ ಉರುಳಿ ಬೀಳುವುದನ್ನು ಕಂಡು ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದಿಂದ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.