ವಿಟ್ಲ : ಶ್ರೀದೇವಿ ಸೌಂಡ್ಸ್ ನ ಮಾಲಕರಾದಂತಹ ಚಂದಳಿಕೆ ನಿವಾಸಿ ಚಂದ್ರಶೇಖರ್ ಗೌಡ ರವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.20 ರಂದು ನಿಧನರಾದರು.
ತೀವ್ರ ಅನಾರೋಗ್ಯದ ಹಿನ್ನೆಲೆ ಅವರನ್ನು ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆ ತರಲಾಯಿತಾದರೂ ದಾರಿ ಮಧ್ಯೆಯೇ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಾವಿಗೆ ನಿಖರ ಮಾಹಿತಿ ಮರಣೋತ್ತರ ಪರೀಕ್ಷೆಯ ನಂತರ ತಿಳಿಯಬೇಕಿದೆ.
ಮೃತರು ತಂದೆ, ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.