ಮಂಗಳೂರು: ಆಗಸ್ಟ್ 2ರಿಂದ ಮಂಗಳೂರು ವಿ.ವಿ ಪರೀಕ್ಷೆಗಳು ಆರಂಭಗೊಳ್ಳಲಿದೆ ಎಂದು ವಿಶ್ವ ವಿದ್ಯಾಲಯ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಯ 1, 3, 5, 7ನೇ ಸೆಮಿಸ್ಟರ್ ನ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಪರೀಕ್ಷೆಗಳು ಆಗಸ್ಟ್ 2ರಿಂದ ಆರಂಭಗೊಳ್ಳಲಿದೆ. ಅಲ್ಲದೆ, 1 ಹಾಗೂ 3ನೇ ಸೆಮಿಸ್ಟರ್ ನ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಆಗಸ್ಟ್ 5ರಿಂದ ಆರಂಭಗೊಳ್ಳಲಿದೆ. ಸರಕಾರದ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.