ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದ ನೌಕರರುಗಳನ್ನು 2021-22ನೇ ಸಾಲಿನಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಗೆ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಬೇರೆ ಜಿಲ್ಲೆಗಳ ಪಿಡಿಓಗಳ ವರ್ಗಾವಣೆ ಮಾಡಲು ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ 18 ಗ್ರಾಮ ಪಂಚಾಯತಿಗಳ ಪಿಡಿಓಗಳನ್ನು ಇದೇ ಜಿಲ್ಲೆಯ ಬೇರೆ ಪಿಡಿಓಗಳಿಗೆ ವರ್ಗಾವಣೆ ಮಾಡಿದೆ.