ವಿಟ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ನೀರ್ಕಜೆ ಕೃಷ್ಣ ಭಟ್ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಬ್ರಹ್ಮಚರ್ಯವನ್ನು ಸ್ವೀಕರಿಸಿದ್ದರು, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅನೇಕ ಹೋರಾಟಗಳನ್ನು ಮಾಡಿ ಸೇವೆಗೈದಿದ್ದರು. ಸಂಘದ ಅನೇಕ ಹಿರಿಯ ನಾಯಕರ ಸಂಪರ್ಕವನ್ನು ಹೊಂದಿದ್ದ ಕೃಷ್ಣಭಟ್ಟರು ಅಂದಿನ ಕಾಲದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ.