ಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆಯ 2020- 25ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಉದ್ಯಮಿ, ಪ್ರಗತಿಪರ ಕೃಷಿಕ ಕಿಶೋರ್ ಕುಮಾರ್ ಕೊಡ್ಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕುಂದಾಪುರ ತಾಲೂಕಿನ ಅಮಾಸೆಬೈಲು ನಿವಾಸಿಯಾಗಿರುವ ಅವರು, ಹಿರಿಯ ಸಹಕಾರಿ, ರಾಜ್ಯದ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ ಅವರ ಪುತ್ರ. ಇವರು ಕಳೆದ ಅವಧಿಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಹಾಲಿ ಅವಧಿಗೂ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿ ಇದೀಗ ಅಧ್ಯಕ್ಷರಾಗಿದ್ದಾರೆ.ಭಾನುವಾರ ನಗರದ ಶಾರದಾ ವಿದ್ಯಾಲಯದಲ್ಲಿ ಮಹಾಸಭೆ ಬಳಿಕ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಶಂಕರನಾರಾಯಣ ಭಟ್ ಖಂಡಿಗೆ ಅವರು ಕೂಡಾ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.