ಪುತ್ತೂರು: ಭಾರತೀಯ ವಾಯುಪಡೆಯಲ್ಲಿ ಇಂಜಿನಿಯರಿಂಗ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸ್ಕ್ವಾಡ್ರನ್ ನಾಯಕ ಶರತ್ ಬಿ ಮಾಧವ ಇವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ರವರು ಶರತ್ ಬಿ ಮಾಧವರವರಿಗೆ ಶಾಲು ಹೊದಿಸಿ, ಪುಸ್ತಕ ನೀಡಿ ಸನ್ಮಾನಿಸಿದರು.
ಪುತ್ತೂರಿನ ಕೂರ್ನಡ್ಕದ ಮಾಧವ ಬಿ.ಕೆ ಮತ್ತು ಲೀಲಾವತಿ ದಂಪತಿಗಳ ಪುತ್ರ ಶರತ್ ರವರು ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ತೆಂಕಿಲದ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ,ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಡೆದು ಬಳಿಕ ಇಂಜಿನಿಯರಿಂಗ್ ಪದವಿಯನ್ನು ಮೈಸೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪೂರೈಸಿದರು. ಇವರು ಪ್ರಸ್ತುತ ಕೋಲ್ಕತ್ತದ ಕಲೈಕುಂಡದಲ್ಲಿ ಭಾರತೀಯ ವಾಯುಪಡೆಯಲ್ಲಿ ಇಂಜಿನಿಯರಿಂಗ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಡಬದ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ರಾವ್ ಮಂಕುಡೆ , ಭೌತಶಾಸ್ತ್ರವಿಭಾಗದ ಮುಖ್ಯಸ್ಥ ಹರೀಶ ಶಾಸ್ತ್ರೀ,ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಳಿನ ಕುಮಾರಿ, ಗಣಿತ ವಿಭಾಗದ ಮುಖ್ಯಸ್ಥೆ ಚಿನ್ಮಯಿಮಯ್ಯ ಉಪಸ್ಥಿತರಿದ್ದರು.