ಭಾರೀ ಮಳೆಯ ಕಾರಣದಿಂದ ಶಿರಾಡಿ ಘಾಟಿ- ಸಕಲೇಶಪುರ ನಡುವಿನ ದೋಣಿಗಲ್ ಬಳಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೀಗಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸಿ ತೆರಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ಸಂಚರಿಸುವ ವಾಹನ ಸವಾರರು ಚಾರ್ಮಾಡಿ ಅಥವಾ ಸಂಪಾಜೆ ಅಥವಾ ಬಿಸಿಲೆ ಘಾಟ್ ಮೂಲಕ ಸಂಚರಿಸಬೇಕು ಎಂದು ತಿಳಿಸಿದ್ದಾರೆ.