ಪುತ್ತೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅಸರ್ಮಪಕ ಚರಂಡಿ ವ್ಯವಸ್ಥೆಯನ್ನು ಖಂಡಿಸಿ, ಸೂಕ್ತ ರೀತಿಯಲ್ಲಿ ಚರಂಡಿ ನಿರ್ಮಾಣ ಮಾಡಿಕೊಡುವಂತೆ ಬನ್ನೂರಿನ ಕೆಇಬಿ ಕಚೇರಿ ಮುಂಭಾಗದಲ್ಲಿ ಜು.23 ರಂದು ಪ್ರತಿಭಟನೆ ನಡೆಸಲಾಯಿತು.
ಚರಂಡಿಗಳನ್ನು ಸೂಕ್ತ ರೀತಿಯಲ್ಲಿ ಚರಂಡಿ ನಿರ್ಮಾಣ ಮಾಡಿಕೊಡುವಂತೆ ಎಸ್ ಡಿ ಪಿ ಐ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಇನ್ಸ್ಪೆಕ್ಟರ್ ಗೋಪಾಲ್ ನಾಯ್ಕ್ ಸಂಜೆ 5 ಗಂಟೆ ಒಳಗೆ ಸರಿಪಡಿಸುವ ಭರವಸೆಯನ್ನು ನೀಡಿದರು. ಈ ನಿಟ್ಟಿನಲ್ಲಿ ಎಸ್ ಡಿ ಪಿ ಐ ಪ್ರತಿಭಟನೆಯನ್ನು ಹಿಂಪಡೆದಿದೆ.
ನಗರ ಸಭಾ ಪೌರಾಯುಕ್ತರಾದ ಮಧು ಮನೋಹರ್ ಭೇಟಿ ನೀಡಿದ್ದು ಪ್ರತಿಭಟನೆ ನಡೆಸುವುದು ಸರಿಯಲ್ಲ ಮಾತನಾಡಿ ಬಗೆಹರಿಸುವ ಎಂದು ಪ್ರತಿಭಟನೆಯಲ್ಲಿದ್ದ ಕೆಲ ಪ್ರಮುಖರನ್ನು ಠಾಣೆಗೆ ಬರುವಂತೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.