ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ನೈವೇದ್ಯಕ್ಕಾಗಿ ಕೆಮ್ಮಿಂಜೆ ಗ್ರಾಮದ ನೈತ್ತಾಡಿಯಲ್ಲಿ ವ್ಯವಸಾಯ ಮಾಡುತ್ತಿರುವ ಸುಮಾರು ನಾಲ್ಕು ಎಕ್ರೆ
ವಿಸ್ತೀರ್ಣದ ಗದ್ದೆಯನ್ನು ಉತ್ತು ಹದ ಮಾಡಿದ್ದು ಅದರ ನಾಟಿ ಮಾಡುವ ಕಾರ್ಯಕ್ರಮವು ಜು.25 ರಂದು
ನಡೆಯಲಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕರವರು ನೆರವೇರಿಸಲಿದ್ದಾರೆ. ನೇಜಿ ಯಂತ್ರ ಚಾಲನೆಯನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಇವರು ನೆರವೇರಿಸಲಿದ್ದಾರೆ.
ಮುಂದಿನ ದಿನಗಳಲ್ಲಿ ಪೈರು ಕಟಾವಿಗೆ ಬಂದ ಸಂದರ್ಭದಲ್ಲಿ ಬೆಳೆ ಕೊಯ್ಲು ಕಾರ್ಯಕ್ರಮವನ್ನು ಹಮ್ಮಿಕೊಂಡು ಉಗ್ರಾಣ ತುಂಬಿಸುವ ಕಾರ್ಯಕ್ರಮವನ್ನು ನೆರವೇರಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ದೇವಳದ ಭಕ್ತಾದಿಗಳು ಗದ್ದೆ ನಾಟಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ
ಮುಳಿಯ ಕೇಶವಪ್ರಸಾದ್ ಹಾಗೂ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.