ಬಂಟ್ವಾಳ: ಕೇಪು ಶ್ರೀಉಳ್ಳಾಲ್ತಿ ಸೇವಾ ಟ್ರಸ್ಟ್ ನ ಸಭೆಯು ಜು.25 ರಂದು ಪ್ರಭಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕೇಪು ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಶಾಲೆಯ ಅಭಿವೃದ್ಧಿಯ ಉದ್ದೇಶಕ್ಕಾಗಿ 15 ಜನರ ಕಮಿಟಿಯನ್ನು ಮಾಡುವುದಾಗಿ ಹಾಗೂ ಶಾಲಾ ತಾತ್ಕಾಲಿಕ ಶಿಕ್ಷಕರ ವೇತನವನ್ನು ಟ್ರಸ್ಟ್ ವತಿಯಿಂದ ನೀಡುವುದಾಗಿ ತೀರ್ಮಾನಿಸಲಾಯಿತು.
ಆಂಗ್ಲ ಮಾಧ್ಯಮ ಶಾಲಾ ತರಗತಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಹೊಂದಿಸಿಕೊಳ್ಳುವ ಬಗ್ಗೆ ಟ್ರಸ್ಟ್ ವತಿಯಿಂದ ಜನರ ಮನವೊಲಿಸಿ ಶ್ರಮಿಸುವುದಾಗಿ ಮತ್ತು ಶ್ರೀಉಳ್ಳಾಲ್ತಿ ಸೇವಾ ಟ್ರಸ್ಟ್ ಅನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೃಷ್ಣಮೂರ್ತಿ ಕಟ್ಟೆ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಶಾಲಾ ಮುಖ್ಯ ಶಿಕ್ಷಕಿ ಭಾಗೀರಥಿ, ಗ್ರಾಮ ಪಂಚಾಯತ್ ಸದಸ್ಯ ಜಗಜೀವನ್ ರಾಮ್ ಶೆಟ್ಟಿ, ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ, ನಿಕಟಪೂರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಉಮೇಶ್ ಕೊರತಿಗದ್ದೆ ಕಾರ್ಯಕ್ರಮ ನಿರೂಪಿಸಿದರು.