ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76)ಯವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಅಭಿಯನ ಶಾರದೆ ಜಯಂತಿಯವರು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ 190 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೂ ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ಜಯಂತಿಯವರ ಹೆಸರು ಚಿರಪರಿಚಿತ.
ಇವರು ಕನ್ನಡ ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್ ನಟಿ ಅಂತಲೂ ಕರೆಯಲ್ಪಡುತ್ತಿದ್ದರು. ಇವರ ಮನೋಜ್ಞ ಅಭಿನಯಕ್ಕೆ ‘ಅಭಿನಯ ಶಾರದೆ’ ಎಂಬ ಬಿರುದನ್ನ ನೀಡಿ ಕನ್ನಡ ಸಿನಿಮಾ ಇಂಡಸ್ಟ್ರಿ ಗೌರವಿಸಿದೆ.