ಪುತ್ತೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯನ್ನು ಬಲಗೊಳಿಸುವ ಸದುದ್ದೇಶದಿಂದ ಹಾಗೂ ಎ ಐ ಸಿ ಸಿ ಹಾಗೂ ಕೆ ಪಿ ಸಿ ಸಿ ಯ ನಿರ್ದೇಶಿಸಿರುವ ಕಾರ್ಯಕ್ರಮ ಗಳನ್ನು ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಅನುಷ್ಠಾನ ಗೊಳಿಸಲು ಸಹಕರಿಸುವರೇ ಪ್ರತಿ ಬ್ಲಾಕ್ ಕಾಂಗ್ರೆಸ್ ಗೆ ಸಂಯೋಜಕರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ರವರು ಆದೇಶ ಹೊರಡಿಸಿದ್ದಾರೆ. ಅದರಂತೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ನ ಪಕ್ಷದ ಸಂಯೋಜಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ಯವರನ್ನು ನೇಮಕ ಗೊಳಿಸಿ ಆದೇಶ ಮಾಡಲಾಗಿದೆ.
ಎಚ್ ಮಹಮ್ಮದ್ ಅಲಿ ಯವರು ದಕ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದು, ಈ ಹಿಂದೆಯು ಬೆಳ್ತಂಗಡಿ ಗ್ರಾಮೀಣ ಹಾಗೂ ನಗರ ಬ್ಲಾಕ್ ಈ ಎರಡು ಬ್ಲಾಕ್ ನ ಉಸ್ತುವಾರಿಯಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಎಚ್ ಮಹಮ್ಮದ್ ಅಲಿ ಯವರು ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿಷ್ಠೆಯಿಂದ ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವುದರಿಂದ ಇವರಿಗೆ ಪಕ್ಷ ಸಂಘಟನೆ ಬಗ್ಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.