ಪುತ್ತೂರು: 199ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಯೋಧರ ಧೈರ್ಯ ಸಾಹಸದ ಕೆಚ್ಚೆದೆಯ ಹೋರಾಟದಲ್ಲಿ ಕಾರ್ಗಿಲ್ ಯುದ್ಧವನ್ನು ಜಯಿಸಿದ ದಿನವಾದ ಜು.26 ರಂದು ‘ಕಾರ್ಗಿಲ್ ವಿಜಯ’ ದಿವಸವಾಗಿ ಆಚರಿಸಲಾಗುತ್ತಿದ್ದು,ಈ ನಿಟ್ಟಿನಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಇದರ ವತಿಯಿಂದ ಪುತ್ತೂರಿನ ಅಮರ್ ಜವಾನ್ ಜ್ಯೋತಿ ವೃತ್ತದ ಬಳಿ ‘ಕಾರ್ಗಿಲ್ ವಿಜಯ’ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಳ,ತಾಲೂಕು ಅಧ್ಯಕ್ಷ ಅಶೋಕ್ ತ್ಯಾಗರಾಜ ನಗರ,ತಾಲೂಕು ಉಪಾಧ್ಯಕ್ಷ ಶಶಿಕಾಂತ್, ತಾಲೂಕು ಕಾರ್ಯದರ್ಶಿ ದಿನೇಶ್ ಪಂಜಿಗ, ತಾಲೂಕು ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರಕಟ್ಟೆ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.