ನವದೆಹಲಿ: ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ಮಾಡಬಾರದು. ಇದಕ್ಕೆ ಸರ್ಕಾರಗಳು ಕೂಡ ಪರವಾನಗಿ ನೀಡಬಾರದು ಎಂದು ಖಡಕ್ ಆಗಿ ಹೇಳಿದೆ.
ಯಾವುದೇ ಹೆದ್ದಾರಿಗಳ 500 ಮೀಟರ್ ವ್ಯಾಪ್ತಿಯೊಳಗೆ ಮದ್ಯದಂಗಡಿ ತೆರೆಯಬಾರದು. ವಿಶೇಷವಾಗಿ 20 ಸಾವಿರಕ್ಕಿಂತ ಕಡಿಮೆ ಜನರು ವಾಸಿಸುವ ಸ್ಥಳಗಳಲ್ಲಿರುವ ಹೆದ್ದಾರಿಗಳ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ಕೊಡಬಾರದು ಎಂದು ಆದೇಶಿಸಿದೆ.
ಇನ್ನು, ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಕೇಂದ್ರ ಸಾರಿಗೆ ಇಲಾಖೆ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಮದ್ಯದಂಗಡಿಗಳ ಮಾಹಿತಿ ಕಲೆ ಹಾಕುತ್ತಿದೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಮದ್ಯದ ಅಂಗಡಿಗಳನ್ನು ಆಯಾ ಸ್ಥಳೀಯ ಸರ್ಕಾರಗಳೊಂದಿಗೆ ಚರ್ಚಿಸಿ ತೆರವುಗೊಳಿಸಲಾಗುತ್ತದೆ.