ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆ ಆಗಿದ್ದಾರೆ. ಈ ಮೂಲಕ ರಾಜ್ಯದ ನೂತನ ಸಿಎಂ ಯಾರಾಗ್ತಾರೆ ಅನ್ನೋ ತೀವ್ರ ಕುತೂಹಲಕ್ಕೆ ತೆರೆ ಬಿದ್ದಿದೆ. ಲಿಂಗಾಯತ ಸಮುದಾಯದವರೇ ಆದ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಜೆಪಿ ಮಣೆ ಹಾಕಿದೆ. ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಯವರನ್ನು ಆಯ್ಕೆ ಮಾಡಲಾಗಿದೆ.
ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್ನ ನಿಯೋಗ ರಾಜ್ಯಕ್ಕೆ ಆಗಮಿಸಿತ್ತು. ಇದೀಗ ಬಿಜೆಪಿ ಹೈಕಮಾಂಡ್ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಅಂತಿಮವಾಗಿ ಬಸವರಾಜ್ ಬೊಮ್ಮಾಯಿ ಅವರನ್ನ ಸಿಎಂ ಅಭ್ಯರ್ಥಿಯನ್ನಾಗಿ ಮಾಡಿದೆ. ಹೈಕಮಾಂಡ್ ಸೂಚನೆಯಂತೆ ಇಂದು ಸಂಜೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದಿಂದ ಬೊಮ್ಮಾಯಿ ಅವರನ್ನ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.