ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಅಂಗಣದಲ್ಲಿ ಅನ್ಯಕೋಮಿನ ಯುವಕನೋರ್ವ ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿ ದೇವಾಲಯದ ಅಂಗಣದ ಮಣ್ಣನ್ನು ಅಗೆದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಕೊಂಡು ಹೋದ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅನುಮಾನಾಸ್ಪದವಾಗಿ ವರ್ತಿಸಿದ ಈ ವ್ಯಕ್ತಿಯನ್ನು ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಕಲಂದರ್ ಎನ್ನಲಾಗಿದೆ.
ಜು.24 ರಂದು ದೇವಸ್ಥಾನದಲ್ಲಿ ಜನಸಂಖ್ಯೆ ಕಡಿಮೆ ಇರುವ ಸಮಯದಲ್ಲಿ ಕಲಂದರ್ ಎಂಬವರು ಸಂಶಯಾಸ್ಪದವಾಗಿ ವರ್ತಿಸಿದ್ದು, ದೇವಳದ ವಠಾರದಿಂದ ಮಣ್ಣು ಅಗೆದು ಅದನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಕೊಂಡು ಹೋಗಿದ್ದಾನೆ. ಈ ಕೃತ್ಯದಿಂದ ಹಲವಾರು ಅನುಮಾನಗಳು ಸೃಷ್ಟಿಯಾಗಿದ್ದು, ವ್ಯಕ್ತಿಯಿಂದ ಶ್ರೀ ಕ್ಷೇತ್ರಕ್ಕೆ ಯಾವುದೋ ಅನಾಹುತ ಸಂಭವಿಸುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಈ ಹಿಂದೆ ಈತನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ವಿಚಾರಣೆಗೆ ಒಳಪಡಿಸುವಂತೆ ಒತ್ತಾಯಿಸಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.