ಪುತ್ತೂರು: ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಸ್ವರ್ಗಸ್ಥರಾದ ಜಿಲ್ಲಾ ಮಠ ಮಂದಿರ ಪ್ರಮುಖ್ ಅರುಣ್ ಕುಮಾರ್ ಶೆಟ್ಟಿ ನುಳಿಯಾಲುಗುತ್ತು ರವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ವಿಹಿಂಪ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು.
ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿಎಸ್ ನುಡಿನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯವಾದಿ ಪ್ರಮುಖ್ ಮಾಧವ ಪೂಜಾರಿ, ಪ್ರಖಂಡ ಅಧ್ಯಕ್ಷ ಜನಾರ್ಧನ ಬೆಟ್ಟ, ಬಜರಂಗದಳ ಜಿಲ್ಲಾ ಸಂಯೋಜಕ ಶ್ರೀಧರ ತೆಂಕಿಲ ಮುಂತಾದವರು ಉಪಸ್ಥಿತರಿದ್ದರು. ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು ಕಾರ್ಯಕ್ರಮ ನಿರ್ವಹಿಸಿದರು.