ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಗೆಲುವಿನ ಓಟ ಮುಂದುವರಿಸಿದ್ದಾರೆ. ಇಂದು ನಡೆದ ನಾಕೌಟ್ ಪಂದ್ಯದಲ್ಲಿ ಡೆನ್ಮಾರ್ಕ್ನ ಮಿಯಾ ಬ್ಲೆಚ್ಫೆಲ್ಡ್ ಎದುರು ಭರ್ಜರಿ ಗೆಲವು ಸಾಧಿಸಿದ ಸಿಂಧು, ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ.
ಸುಮಾರು 40 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಪರಾಕ್ರಮ ಮೆರೆದ ಸಿಂಧು, 21-15, 21-13 ಅಂತರದ ನೇರ ಸೆಟ್ಗಳಿಂದ ಡೆನ್ಮಾರ್ಕ್ ಆಟಗಾರ್ತಿಯನ್ನ ಮಣಿಸಿದರು. ಇದರೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿರುವ ಸಿಂಧು, ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.