ಕೊಚ್ಚಿನ್: ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.
ಕೊರೊನಾ ಹೆಚ್ಚುತ್ತಿರುವುದರಿಂದ ಕೇರಳ ಸರ್ಕಾರ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿದ್ದು, ಸರ್ಕಾರದ ಆದೇಶದಂತೆ ಜುಲೈ 31 ಮತ್ತು ಆಗಸ್ಟ್ 1ರಂದು ಕೇರಳದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರಲಿದೆ.
ಕೇರಳದಲ್ಲಿ ಬುಧವಾರ 22,056 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು 33,27,301 ಸಕ್ರಿಯ ಪ್ರಕರಣಗಳಿವೆ, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 131 ಮಂದಿ ಕೊರೊನಾಗೆ ಬಲಿಯಾಗಿದ್ದು, ಇದುವರೆಗೂ 16,457 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಕೊರೊನಾ ಪರಿಸ್ಥಿತಿ ಅವಲೋಕಿಸಲು ಕೇಂದ್ರ ತಜ್ಞರ ತಂಡ ಭೇಟಿ ನೀಡುತ್ತಿದ್ದು, ನಾಲ್ಕು ಮಂದಿಯ ತಜ್ಞರ ತಂಡ ಶೀಘ್ರವೇ ಕೇರಳಕ್ಕೆ ಆಗಮಿಸಲಿದೆ ಎನ್ನಲಾಗಿದೆ.