ಬಂಟ್ವಾಳ: ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಪತ್ತೆಯಾಗಿದ್ದು, ಸಂಶಯಕ್ಕೆ ಕಾರಣವಾಗಿದೆ.
ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂಬವರ ಮೃತದೇಹ ದೇವಂದಬೆಟ್ಟು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಸಂಜೆ ಮನೆಯಿಂದ ಹೋರಟ ಕಾರ್ತಿಕ್ ರಾತ್ರಿ 11 ಗಂಟೆ ವರೆಗೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಆತನ ಹುಡುಕಾಟ ಆರಂಭಿಸಿದ್ದರು. ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಉನ್ನತ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಾವಿನ ಬಗ್ಗೆ ಸಂಶಯವಿರುವ ಹಿನ್ನೆಲೆಯಲ್ಲಿ ಪೋಲೀಸರು ತನಿಖೆ ಮುಂದುವರಿಸಿದ್ದಾರೆ.