ಕುಂದಾಪುರ: ತಾಲೂಕಿನ ಸಳ್ವಾಡಿಯಲ್ಲಿ ಫೈನಾನ್ಸ್ ನಡೆಸುತ್ತಿದ್ದ ಫೈನಾನ್ಶಿಯರ್ ಓರ್ವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜು.30ರ ಶುಕ್ರವಾರ ತಡರಾತ್ರಿ ನಡೆದಿದೆ.
ಕೊಲೆಯಾದ ಫೈನಾನ್ಶಿಯರ್ ರನ್ನು ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಎಂದು ಗುರುತಿಸಲಾಗಿದೆ. ಅಜೇಂದ್ರ ಅವರು ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ಡ್ರೀಮ್ ಫೈನಾನ್ಸ್ ಎನ್ನುವ ಫೈನಾನ್ಸ್ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದರು.
ಅಜೇಂದ್ರ ಶೆಟ್ಟಿ ರಾತ್ರಿಯಾದರೂ ಮನೆಗೆ ಹಿಂತಿರುಗದ ಕಾರಣ ಮನೆಯವರು ಹಾಗೂ ಅವರ ಸ್ನೇಹಿತರು ಅವರಿಗಾಗಿ ಹುಡುಕಾಡತೊಡಗಿದ್ದಾರೆ. ಈ ವೇಳೆ ಸ್ನೇಹಿತರಿಗೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.