ಸುಳ್ಯ: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಕಳೆದ ಶನಿವಾರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆ ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಉಮೇಶ್ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಕೌಟುಂಬಿಕ ಸಮಸ್ಯೆಯಿಂದಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದ್ದು, ಸ್ಪಷ್ಟ ಕಾರಣ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.