ಪುತ್ತೂರು: ಕೊಳ್ತಿಗೆ ವಲಯ ಕಾಂಗ್ರೆಸ್ ಸಭೆಯು ಪೆರ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ವಲಯ ಅಧ್ಯಕ್ಷ ಕೆಮ್ಮಾರ ಮುರಳೀಧರ ಗೌಡರವರ ಅಧ್ಯಕ್ಷತೆಯಲ್ಲಿ ಆ.1 ರಂದು ನಡೆಯಿತು. ಸಭೆಯಲ್ಲಿ ಮುಂದಿನ ಅವಧಿಗೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ ಎಸ್ ವೆಂಕಟರಮಣ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಕೆ ಎಸ್ ರವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ್ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೋನ್ ಸಿಕ್ವೆರಾ, ಬ್ಲಾಕ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಮೆಲ್ವಿನ್ ಮೊಂತೆರೋ, ಬ್ಲಾಕ್ ಕೋವಿಡ್ ಸೇವಕ್ ಸಿಮ್ರಾನ್ ನಜಿರ್, ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ಯಾಮ್ ಸುಂದರ ರೈ,ಕೊಳ್ತಿಗೆ ಸಹಕಾರಿ ಸಂಘದ ಅಧ್ಯಕ್ಷ ಕೆ ವಸಂತ ಕುಮಾರ ರೈ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗಂಗಾಧರ ಗೌಡ, ರಾಮ ಪಾಂಬಾರು, ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಕೆಮ್ಮಾರ, ಪಂಚಾಯತ್ ಸದಸ್ಯರಾದ ಪವನ್ ಡಿ ಜಿ, ಶ್ರೀಮತಿ ಪ್ರೇಮ ಶ್ರೀಧರ್ ಪೂಜಾರಿ, ಸಹಕಾರಿ ಸಂಘದ ನಿರ್ದೇಶಕರಾದ ಶ್ರೀಮತಿ ನಾಗವೇಣಿ ಕಟ್ಟಪುಣಿ, ವಲಯ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀಧರ್ ಪೂಜಾರಿ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಯಶೋಧರ ಪಾಂಬಾರು, ಶಾಹುಲ್ ಹಮೀದ್ ಅಮಲ ಜಗನ್ನಾಥ ರೈ ಮಣಿಕ್ಕರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವಲಯ ಕಾಂಗ್ರೆಸ್ ಅಧ್ಯಕ್ಷ ಕೆ ಎಸ್ ವೆಂಕಟರಮಣ ಗೌಡ ರವರು ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಳ್ತಿಗೆ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಕೆ.ಎಸ್ ಪ್ರಮೋದ್ ರವರು ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾಗಿ, ಪುತ್ತೂರು ಎ ಪಿ ಎಂ ಸಿ ಯ ಸದಸ್ಯರಾಗಿ ಈಗ ಕೊಳ್ತಿಗೆ ಅರಣ್ಯ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.