ಪುತ್ತೂರು: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಸಭೆಯು ಕೋವಿಡ್ ಪ್ರೋಟೋಕಾಲ್ ನಂತೆ ರದ್ದು ಪಡಿಸಿದ್ದು,ಆ ಸಂದರ್ಭದಲ್ಲಿ ಬ್ಲಾಕ್ ಕಚೇರಿಗೆ ಭೇಟಿ ನೀಡಿದ ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಗೆ ರಾಜ್ಯ ಉಸ್ತುವಾರಿಯಾಗಿರುವ ಮಣ್ಣಾರ್ ಮಣ್ಣನ್ ರವರು ಯುವ ಕಾಂಗ್ರೆಸ್ ಹಾಕಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಪಕ್ಷಕ್ಕೆ ಯುವಕರನ್ನು ಸೆಳೆದು ಪಕ್ಷ ಸಂಘಟಿಸುವ ಕಾರ್ಯತಂತ್ರದ ಬಗ್ಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಜಿಲ್ಲಾ ಸಹಕಾರಿ ಯೂನಿಯನ್ನಿ ನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯ ದರ್ಶಿ ಯಾಕೂಬ್ ದರ್ಬೆ, ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ ಎಚ್ ಶಕೂರ್ ಹಾಜಿ, ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷ ಶರೋನ್ ಸಿಕ್ವೆರಾ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಯುವ ಕಾಂಗ್ರೆಸ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಕೆಮ್ಮಾರ, ಪ್ರಧಾನ ಕಾರ್ಯದರ್ಶಿ ಸನದ್ ಯೂಸುಫ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.